9:04 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ

06/04/2022, 10:48

ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಪ್ರಾಪ್ತೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದರು. ಈ ವೇಳೆ ರಕ್ಷಿಸಿದ ಹೆಣ್ಣು ಮಕ್ಕಳಲ್ಲಿ ನಾಲ್ವರು ಬಾಂಗ್ಲಾದೇಶದವರಾಗಿದ್ದು, ಅವರಲ್ಲಿ ಒಬ್ಬರು ಅಪ್ರಾಪ್ತೆಯಾಗಿದ್ದಾಳೆ.

ಈ ಸಂಬಂಧ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ ಮಾತನಾಡಿ, ಈ ಲಾಡ್ಜ್ನಲ್ಲಿ ಮೊದಲಿನಿಂದಲೂ ವೇಶ್ಯಾವಾಟಿಕೆ ದಂದೆ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ, ಏನೂ ಮಾಡಲು ಸಾಧ್ಯವಾಗಿರಲಿಲ್ಲ. ವಿಜಯನಗರ ಪೊಲೀಸ್ ಠಾಣೆಯ ಜಯಕುಮಾರ್ ಅವರ ಸಹಕಾರದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಿಂದೆಯೂ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದಾಳಿ ಮಾಡಿದ್ದರು. ಆದರೂ ಮತ್ತೆ ಅವರು ದಂಧೆ ಮುಂದುವರೆಸಿದ್ದಾರೆ. ಹಾಗಾಗಿ ಹೋಟೆಲ್ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು