1:42 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಬಾಲಿವುಡ್ ಹಿರಿಯ ಹಾಗೂ ಖ್ಯಾತ ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ

08/10/2026, 12:39

*45 ನಿಮಿಷ ವೈದ್ಯರು ಯತ್ನಿಸಿದರೂ ಬದುಕದ ನಾನಾ:*

*ನಟ ನಾನಾ ಪಾಟೇಕರ್ ಅವರು ಮನೆಯಲ್ಲೇ ಕುಸಿದು ಬಿದ್ದು ಆಸ್ಪತ್ರೆಗೆ ಬರುವಷ್ಟರಲ್ಲಿ ಸಾವನ್ನಪ್ಪಿದ್ದರು*

ಪಣಜಿ(reporterkarnataka.com): ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ನಾನಾ ಪಾಟೇಕರ್ ಅವರು ನಿಧನರಾಗಿದ್ದಾರೆ. ಗೋವಾದಲ್ಲಿದ್ದ ತಮ್ಮ ನಿವಾಸದಲ್ಲಿ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ತಂದಾಗ ನಾನಾ ಪಾಟೇಕರ್ ಅವರ ಆರೋಗ್ಯ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿತ್ತು. ಮಣಿಪಾಲ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ್ ಸಾಲ್ಕರ್ ಅವರು ಮಾಹಿತಿ ನೀಡಿ, ವೈದ್ಯಕೀಯ ಸಿಬ್ಬಂದಿ ಸತತ 45 ನಿಮಿಷಗಳ ಕಾಲ ಸಿಪಿಆರ್ (CPR) ನೀಡುವ ಮೂಲಕ ಅವರನ್ನು ಬದುಕಿಸಲು ವೈದ್ಯರು ಶಕ್ತಿಮೀರಿ ಪ್ರಯತ್ನಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ನಾನಾ ಪಾಟೇಕರ್ ಅವರು ಮುಂಜಾನೆ 5:20ಕ್ಕೆ ಕೊನೆಯುಸಿರೆಳೆದರು ಎಂದು ತಿಳಿಸಿದ್ದಾರೆ. ನಟ ನಾನಾ ಪಾಟೇಕರ್ ಅವರು ಮನೆಯಲ್ಲೇ ಕುಸಿದು ಬಿದ್ದು ಆಸ್ಪತ್ರೆಗೆ ಬರುವಷ್ಟರಲ್ಲಿ ಸಾವನ್ನಪ್ಪಿದ್ದರಿಂದ, ನಿಯಮಾವಳಿಗಳ ಪ್ರಕಾರ ಅಧಿಕಾರಿಗಳು ಈ ಬಗ್ಗೆ ಕಡ್ಡಾಯ ವೈದ್ಯಕೀಯ-ಕಾನೂನು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸಾವು ಸಂಭವಿಸಿದ ನಿಖರ ಕಾರಣವನ್ನು ತಿಳಿದುಕೊಳ್ಳಲು ಮರಣೋತ್ತರ ಪರೀಕ್ಷೆಯನ್ನು (Post-mortem) ನಡೆಸಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು