10:56 AM Wednesday23 - July 2025
ಬ್ರೇಕಿಂಗ್ ನ್ಯೂಸ್
ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ…

ಇತ್ತೀಚಿನ ಸುದ್ದಿ

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ ರಾವ್ ಇನ್ನು ನೆನಪು ಮಾತ್ರ

23/07/2025, 10:49

ಬಂಟ್ವಾಳ(reporterkarnataka.com): ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ನಿವಾಸದಲ್ಲಿ ನಿಧನರಾದರು.
ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ತುಳು ರಂಗಭೂಮಿಯಲ್ಲಿ 4 ದಶಕಗಳ ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಅವರು, ರಂಗಕರ್ಮಿ ಶಾಂತಾರಾಮ ಕಲ್ಲಡ್ಕ ಅವರ ಮಿತ್ರಬಳಗ ಕಲಾತಂಡದ ಮೂಲಕ ತನ್ನ ರಂಗ ಪಯಣ ಆರಂಭಿಸಿದ್ದರು. ಅವರು ಕಾಲೇಜು ದಿನಗಳಲ್ಲೇ ನಾಟಕದಲ್ಲಿ ಅಭಿನಯಿಸುತ್ತಿದ್ದರು. ಕಳೆದ 20 ವರ್ಷಗಳಿಂದ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ಕೊಡಿಯಾಲ್ ಬೈಲ್ ಅವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ “ಶಿವದೂತಗುಳಿಗೆ” ನಾಟಕದ ಭೀಮಾ ರಾವ್ ಪಾತ್ರ ಅವರಿಗೆ ಹೆಸರು ಮತ್ತು ಇಮೇಜನ್ನು ತಂದು ಕೊಟ್ಟಿತ್ತು. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರ ಗಮನ ಸಳೆದಿತ್ತು.


ಸರಳ ಸೌಮ್ಯಸ್ವಭಾವದ ರಮೇಶ್ ಕಲ್ಲಡ್ಕ ಅವರು ರಂಗಭೂಮಿಯಲ್ಲಿ ಶಿಸ್ತಿನ ಕಲಾವಿದರಾಗಿದ್ದರು. ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿದ್ದರು.
1957 ಏಪ್ರಿಲ್ ನಲ್ಲಿ ಜನಿಸಿದ ಅವರು, ಶಾಂತಾರಾಮ ಕಲ್ಲಡ್ಕ ಅವರ ಮಿತ್ರಬಳಗ ಕಲಾತಂಡದ ಬಳಿಕ ಶಾಂತಾರಾಮ ಕಲ್ಲಡ್ಕ ಅವರ ತುಳುವಪ್ಪೆ ಜೋಕುಲು ಕಲಾಬಳಗದಲ್ಲೂ ತೊಡಗಿಸಿಕೊಂಡಿದ್ದರು. ತುಳು ವೃತ್ತಿ ರಂಗಭೂಮಿ ಪ್ರವೇಶಿಸಿದರು. ಬಳಿಕ ಕಲ್ಲಡ್ಕದಲ್ಲಿ ಮೈತ್ರಿ ಕಲಾವಿದರು ತಂಡ ಸ್ಥಾಪಿಸಿ, ಕಲ್ಲಡ್ಕ ಶಾರದೋತ್ಸವದಲ್ಲಿ ನಾಟಕ ‌ಪ್ರದರ್ಶಿಸುತ್ತಿದ್ದರು.
ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿ ಸುದೀರ್ಘ ಕಾಲ ತನ್ನ ವೃತ್ತಿಪಯಣವನ್ನು ನಡೆಸಿದ ಅವರು ಆ ತಂಡದ ಹಿರಿಯ ಹಾಗೂ ಪ್ರಮುಖ ಕಲಾವಿದರಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ನಾಟಕವೊಂದರಲ್ಲಿ ಅಭಿನಯಿಸಿ ಮನೆಗೆ ಮರಳಿದ್ದ ರಮೇಶ್ ಕಲ್ಲಡ್ಕ ಅವರ ನಿಧನಕ್ಕೆ ತುಳುರಂಗಭೂಮಿ ಆಘಾತಗೊಂಡಿದೆ. ಒರಿಯರ್ದೊರಿ ಅಸಲ್, ಮದಿಮೆ ಸಹಿತ ಕೊಡಿಯಾಲ್ ಬೈಲ್ ಅವರ ಜನಪ್ರಿಯ ತುಳು ನಾಟಕಗಳಲ್ಲಿ ರಮೇಶ್ ಅವರು ಗಮನ ಸೆಳೆದಿದ್ದರೆ, ಇತ್ತೀಚಿನ ಶಿವದೂತಗುಳಿಗೆ, ಶಿವಾಜಿ ನಾಟಕಗಳು ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದ ಅವರು ಕಲ್ಲಡ್ಕ ಪರಿಸರದ ಶಾರದೋತ್ಸವ ಸಮಿತಿ ಸಹಿತ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಶಾರದೋತ್ಸವ ಸಮಿತಿಯ ಸ್ಥಾಪಕ ಟ್ರಸ್ಟಿಯಾಗಿದ್ದರು. ಉತ್ತಮ ನಿರೂಪಕರಾಗಿ ಅವರು ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು