3:13 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

7ನೇ ವೇತನ ಆಯೋಗ ರಚನೆ: ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಭರ್ಜರಿ ಸಿಹಿಸುದ್ದಿ

17/03/2022, 09:33

ಬೆಂಗಳೂರು(reporterkarnataka.com):

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈಗಾಗಲೇ ಸಿಎಂ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ  ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತಿನ ಪ್ರಶ್ನೆಗೆ ವೇತನ ಪರಿಷ್ಕರಿಸೋದಕ್ಕೆ ಆಯೋಗ ರಚನೆ ಮಾಡೋದಾಗಿ ತಿಳಿಸಿದ್ದರು. ಇದೀಗ ಇಂದು ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಈ ಬಗ್ಗೆ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರಿ ನೌಕರರಿಗೆ ವೇತನ ನೀತಿ ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೂ ವೇತನ ಪರಿಷ್ಕರಣೆ ಸಲುವಾಗಿ ಸಮಿತಿ ರಚಿಸುವಂತೆ ಪತ್ರ ಬರೆದಿರೋದಾಗಿ ಹೇಳಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು