12:53 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ಹೇಳಿಕೆ ಆಘಾತಕಾರಿ: ಯುವ ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ

30/01/2023, 18:36

ಮಂಗಳೂರು(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ಮಾಡಿದ್ದೇವೆ ಎಂದು ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರ ಎಂದು ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯ ವಿರುದ್ದ ಪೊಲೀಸ್ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿ ಆಗಿದೆ. ಇವರ ಇಂತಹ ಹೇಳಿಕೆಗಳು ನಾಗರಿಕ ಸಮಾಜ ತಲೆ ಬಾಗಿಸುವಂತಹ ಕೆಲಸವಾಗಿದೆ ಎಂದರು.
ಶರಣ್ ಪಂಪ್ ವೆಲ್ ಅವರ ಹೇಳಿಕೆ ಸಮಾಜದಲ್ಲಿ ಹತ್ಯೆ ಹಾಗೂ ಘರ್ಷಣೆಗೆ ಪ್ರಚೋದನೆ ನೀಡುವಂತಿದ್ದು, ಅಮಾಯಕ ಯುವಕರನ್ನು ಇಂತಹ ಸಮಾಜದ್ರೋಹಿ ಕೆಲಸಗಳಿಗೆ ಬಳಸಿಕೊಂಡು ಚುನಾವಣೆ ಹತ್ತಿರವಿರುವ ಸಮಯದಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಲು ಕಾರಣವಾಗುತ್ತಿದೆ. ಇದಕ್ಕೆ ಅವಕಾಶ ನೀಡದೆ ಇಂತಹ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿರುವಂತೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಹೇಳಿಕೆಗೆ ನೇರವಾಗಿ ಬೆಂಬಲಿಸಿದಂತಾಗಿದೆ. ಅಮಾಯಕರನ್ನು ಕೊಲ್ಲುವುದೇ ಇವರ ಹಿಡನ್ ಅಜೆಂಡಾ ಆಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು