9:18 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಉಪರಾಷ್ಟ್ರಪತಿ ಚುನಾವಣೆ: ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ; ಪ್ರಧಾನಿ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಜೋಶಿ ಸಾಥ್

20/08/2025, 21:51

ನವದೆಹಲಿ(reporterkarnataka.com): ಸಂವಿಧಾನಿಕ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಎನ್ ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಪ್ರಮುಖರನೇಕರು ರಾಧಾಕೃಷ್ಣನ್ ಅವರಿಗೆ ಸಾಥ್ ನೀಡಿದರು.
ಇದಕ್ಕೂ ಮುನ್ನ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಗೃಹ ಕಚೇರಿಯಲ್ಲೇ ನಾಮಪತ್ರ ಸಲ್ಲಿಕೆಯ ಅಂತಿಮ ಸಿದ್ಧತೆ ನಡೆಸಿ, ಬಳಿಕ ಎನ್ ಡಿಎ ಆಪ್ತರೊಂದಿಗೆ ತೆರಳಿದರು.
ಉಪರಾಷ್ಟ್ರಪತಿ ಹುದ್ದೆಗೆ ರಾಧಾಕೃಷ್ಣನ್ ಅವರ ಹೆಸರು ಘೋಷಿಸಿದ ದಿನದಿಂದಲೇ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದಲ್ಲಿ ಪ್ರಕ್ರಿಯೆ ಚುರುಕುಗೊಂಡಿದ್ದು, ಕಳೆದ ಎರಡು ದಿನಗಳಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನವದೆಹಲಿಯ ಗೃಹ ಕಚೇರಿ ಎನ್ ಡಿಎ ಕೇಂದ್ರಬಿಂದುವಾಗಿ ಗಮನ ಸೆಳೆಯಿತು.
ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ಅವರು ತಮ್ಮ ಆಪ್ತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಗೃಹದಲ್ಲೇ ತಂಗಿದ್ದರಿಂದ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸಂಸದರು ಹಾಗೂ ಕೇಂದ್ರ ಸರ್ಕಾರದ ಪ್ರಮುಖ ಸಚಿವರುಗಳು ಆಗಮಿಸಿ ಬೆಂಬಲ ಸೂಚಿಸುವ ಜತೆಗೆ ಶುಭ ಹಾರೈಸುತ್ತಿದ್ದರು.
ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ಅವರು ಇಂದು ನಾಮಪತ್ರ ಸಲ್ಲಿಕೆಗೆ ಸಚಿವ ಪ್ರಲ್ಹಾದ ಜೋಶಿ ಅವರ ಗೃಹದಿಂದ ತೆರಳುವ ಸಂದರ್ಭದಲ್ಲಿ ತಮ್ಮೊಂದಿಗೆ ಸಚಿವ ಪ್ರಲ್ಹಾದ ಜೋಶಿ, ಕಿರಣ್‌ ರಿಜಿಜು, ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಎನ್ ಡಿಎ ಪ್ರಮುಖರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು