9:29 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಉಪರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ: ಇಂದು ಶ್ರವಣಬೆಳಗೊಳ, ಮೇಲುಕೋಟೆ, ಮೈಸೂರು ಭೇಟಿ

10/11/2025, 09:19

ಬೆಂಗಳೂರು (reporterkarnataka.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು,‌ ಬೆಳಿಗಿನ ಜಾವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.


ಈ ಸಮಯದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎ (ಬೈರತಿ), ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಜೆಡಿಎಸ್ ಮುಖಂಡರಾದ ಪುಟ್ಟರಾಜು, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿಗಳು ಇಂದು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಿಂದ ಹೆಲಿಕಾಪ್ಟರ್ ಮೂಲಕ ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಮೇಲುಕೋಟೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಇಂದೇ ನವದೆಹಲಿಗೆ ಪ್ರಯಾಣಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು