9:46 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ವಿಚಾರವಾದಿ ಪ್ರೊ. ನರೇಂದ್ರ ನಾಯಕರ ಅಂಗರಕ್ಷಕ ಭದ್ರತೆ ರದ್ದು: ಡಿವೈಎಫ್ಐ ಖಂಡನೆ

30/03/2023, 18:41

ಮಂಗಳೂರು(reporterkarnataka.com): ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕ್ ಅವರಿಗೆ ನೀಡಿ ಅಂಗರಕ್ಷಕ ಭದ್ರತೆಯನ್ನು ಸರಕಾರ ರದ್ದುಗೊಳಿಸಿದ್ದು, ಡಿವೈಎಫ್ ಐ ಜಿಲ್ಲಾ ಸಮಿತಿ ವಿರೋಧಿಸಿದೆ.
ಮೂಢನಂಬಿಕೆಯನ್ನು ಸದಾ ವಿರೋಧಿಸುವ ಪ್ರೊ. ನರೇಂದ್ರ ನಾಯಕ್ ಅವರಿಗೆ ಇದುವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ಏಕಾಏಕಿ ರದ್ದುಗೊಳಿಸಿರೋದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಅವರ ಜೀವಕ್ಕೆ ತೊಂದರೆಯಾಗುವಂತಹ ಅನಾಹುತಗಳಿಗೆ ಪೊಲೀಸ್ ಇಲಾಖೆ, ಸರಕಾರವೇ ನೇರ ಹೊಣೆ ಎಂದು ಹೇಳಿದೆ.
ವಿಚಾರವಾದಿ ನರೇಂದ್ರ ನಾಯಕ್ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ನಿರಂತಹ ಹಮ್ಮಿಕೊಳ್ಳುವ ಮೂಲಕ ಮೂಢನಂಬಿಕೆ ಹೋಗಲಾಡಿಸುವ ಮತ್ತು ಮೂಢನಂಬಿಕೆ ಹೆಸರಲ್ಲಿ ಅನ್ಯಾಯ ಎಸಗುತ್ತಿದ್ದ ಕಪಟ ಜೋತಿಷ್ಯರುಗಳ ವಿರುದ್ದ ರಾಜಿರಹಿತ ಹೋರಾಟಗಳನ್ನು ದೇಶದುದ್ದಗಲಕ್ಕೂ ನಡೆಸುತ್ತಾ ಬಂದಿದ್ದಾರೆ. ಪ್ರೊ. ನರೇಂದ್ರ ನಾಯಕ್ ಅವರ ಒಡನಾಡಿಯಾದ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು, ಹೋರಾಟಗಾರರನ್ನು ಹತ್ಯೆ ಮಾಡಲಾಗಿದೆ. ನರೇಂದ್ರ ನಾಯಕರಿಗೂ ಕೊಲೆ ಬೆದರಿಕೆ ಇರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಷರತ್ತುಗಳಿಲ್ಲದೆ ಅಂಗರಕ್ಷಕ ಭದ್ರತೆಯನ್ನು ಒದಗಿಸಿಕೊಟ್ಟಿದ್ದವು. ಭದ್ರತಾ ಅಂಗರಕ್ಷಕ ಇರುವ ಸಂದರ್ಭದಲ್ಲೇ ನರೇಂದ್ರ ನಾಯಕರ ಮೇಲೆ ಹಲವು ಬಾರಿ ಹಲ್ಲೆ ನಡೆಸುವ, ಜೀವಕ್ಕೆ ಹಾನಿ ಮಾಡುವ ಪ್ರಯತ್ನಗಳು ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ.
ನರೇಂದ್ರ ನಾಯಕರಿಗೆ ಜೀವ ಬೆದರಿಕೆ ಇರುವ ಹಿನ್ನಲೆಯಲ್ಲಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸದೆ ಈ ಹಿಂದಿನಂತೆ ಯಾವುದೇ ಷರತ್ತುಗಳಿಲ್ಲದ ಅಂಗರಕ್ಷಕ ಭದ್ರತೆಯನ್ನು ಒದಗಿಸಿಕೊಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು