4:55 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ 2ನೇ ಬಾರಿಗೆ ಆಯ್ಕೆಯಾದ ಐವನ್ ಡಿಸೋಜರಿಗೆ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ಸನ್ಮಾನ

17/06/2024, 17:40

ಮಂಗಳೂರು(reporterkarnataka.com): ಕಥೊಲಿಕ್ ಸಭಾ-ಸಿಟಿ ವಲಯ ವತಿಯಿಂದ
ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ
ಐವನ್ ಡಿಸೋಜ ಅವರಿಗೆ ಅಭಿನಂದನಾ ಕಾರ್ಯಕ್ರಮ
ಭಾನುವಾರ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ನಡೆಯಿತು.
ಐವನ್ ಡಿಸೋಜ ಅವರು ಸನ್ಮಾನ ಸ್ವೀಕರಿಸಿ, ಸನ್ಮಾನ ಮಾಡಿದ ಸಿಟಿ ವಲಯಕ್ಕೆ ಧನ್ಯವಾದ ತಿಳಿಸಿದರು. ಜಾತಿ ಧರ್ಮ ನೋಡದೆ ಎಲ್ಲರೊಂದಿಗೆ ಬೆರೆತು ಕೆಲಸ ಮಾಡೋಣ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಜಯ ನಮ್ಮದೇ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ-ಸಿಟಿ ವಲಯ ಅಧ್ಯಕ್ಷರಾದ ಅರುಣ್ ಡಿಸೋಜ ವಹಿಸಿದ್ದರು.
ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಶಕ್ತಿನಗರ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಫಾದರ್ ಆಪೊಲಿನಾರಿಸ್ ಕ್ರಾಸ್ತಾ , ಸಿಟಿ ವಲಯದ ಕಾರ್ಯದರ್ಶಿಯಾದ ಡೋರಾ ಡಿಕುನ್ಹಾ, ಶಕ್ತಿನಗರ ಚರ್ಚ್‌ನ ಉಪಾಧ್ಯಕ್ಷರಾದ ಸ್ಟ್ಯಾನಿ ಮಸ್ಕರೇನಸ್, ಸಿಟಿ ವಲಯದ ಎಲ್ಲಾ ಮಾಜಿ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸದಸ್ಯರು , ಘಟಕದ ಎಲ್ಲಾ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಥೊಲಿಕ್ ಸಭಾ ಸಿಟಿ ವಲಯ ನಿಕಟ ಪೂರ್ವ ಅಧ್ಯಕ್ಷರಾದ ವಿಲ್ಫ್ರೆಡ್ ಆಲ್ವಾರಿಸ್ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು