2:29 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಚಿತ್ರದುರ್ಗದಲ್ಲಿ ಇಂದು ಒಟ್ಟು 6 ನಾಮಪತ್ರ ಸಲ್ಲಿಕೆ

23/11/2021, 19:10

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನವೆಂಬರ್ 23ರಂದು ನಡೆಯಲಿರುವ ಚುನಾವಣೆಗೆ ಇಂದು ಒಟ್ಟು 6 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ನಾಮಪತ್ರಗಳ ಸಲ್ಲಿಸಿದವರ ವಿವರ ಇಂತಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ನವೆಂಬರ್ 23ರಂದು 3 ಮಂದಿ ಅಭ್ಯರ್ಥಿಗಳಿಂದ ಒಟ್ಟು 6 ನಾಮಪತ್ರಗಳು ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಸೋಮಶೇಖರ ಬಿ. ಹಾಗೂ ಎಸ್.ಮಂಜುಳಾ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದರು. ಕೆ.ಎಸ್.ನವೀನ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗೂ ಪಕ್ಷೇತರರಾಗಿ ಮೂರು ನಾಮಪತ್ರಗಳನ್ನು ಸಲ್ಲಿಸಿದರು.

ನವೆಂಬರ್ 20 ರಂದು ಪಕ್ಷೇತರ ಅಭ್ಯರ್ಥಿಯಾಗಿ ಹನುಮಂತಪ್ಪ ಅವರು ನಾಮಪತ್ರ ಸಲ್ಲಿಸಿದ್ದರು.

ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಮುಕ್ತಾಯವಾಗಿದ್ದು, ನವೆಂಬರ್ 16 ರಿಂದ ನವೆಂಬರ್ 23 ರವರೆಗೆ ನಾಲ್ಕು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು