11:36 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿದೇಶಗಳಲ್ಲಿ ಕೋವಿಡ್‌ ಹೆಚ್ಚಳ: 8 ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ

12/04/2022, 08:57

ಬೆಂಗಳೂರು(reporterkarnataka.com): ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಸೇರಿದಂತೆ 8 ದೇಶಗಳಲ್ಲಿ ಕೋವಿಡ್ ಹರಡುವಿಕೆ ತೀವ್ರವಾಗಿದ್ದು, ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಟ್ವೀಟ್‌ ಮಾಡಿರುವ ಅವರು, ವಿಶ್ವದಾದ್ಯಂತ ಕೆಲವು ದೇಶಗಳಲ್ಲಿ ಮತ್ತು ನಮ್ಮ ದೇಶದ ಇತರೆ ರಾಜ್ಯಗಳಲ್ಲಿ ಎಕ್ಸ್ಇ ಎಂಬ ಹೊಸ ಕೋವಿಡ್‌ ವೈರಾಣು ಪ್ರಭೇದ ವರದಿಯಾಗಿದ್ದು, 8 ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಥರ್ಮಲ್ ತಪಾಸಣೆ, ಒಂದು ವಾರ ಅಥವಾ ಹತ್ತು ದಿನ ಕಡ್ಡಾಯ ಕ್ವಾರಂಟೈನ್ ಮಾಡಲಾಗುವುದು. ಲಸಿಕೆ ಪಡೆಯದ ಮಕ್ಕಳ ಮೇಲೆ ವಿಶೇಷ ನಿಗಾ ಸೇರಿದಂತೆ ತಜ್ಞರು ನೀಡಿರುವ ಸಲಹೆ ಪರಿಗಣಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜೊತೆಗೆ ಎರಡನೇ ಡೋಸ್ ಬಾಕಿಯಿರುವ ನಾಗರಿಕರು ಕೂಡಲೇ ತಮ್ಮ 2ನೇ ಡೋಸ್ ಪಡೆಯಬೇಕು ಮತ್ತು ಎಲ್ಲ ಅರ್ಹ ನಾಗರೀಕರು ಮುನ್ನೆಚ್ಚರಿಕೆ ಡೋಸ್ ಪಡೆಯುವ ಮೂಲಕ ಹೆಚ್ಚಿನ ಸುರಕ್ಷತೆ ಪಡೆಯಬೇಕು. ನಿರ್ಲಕ್ಷ್ಯ ಮಾಡದೆ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ, ಸಾರ್ವಜನಿಕ ಅಂತರ ಮುಂತಾದ ಕೋವಿಡ್ ಮುನ್ನೆಚ್ಚರಿಕೆಗಕನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು