9:52 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ವಿದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಶೀಘ್ರವೇ 3ನೇ ಡೋಸ್‌ ಕೋವಿಡ್‌ ಲಸಿಕೆ

13/05/2022, 07:54

ಹೊಸದಿಲ್ಲಿ(reporterkarnataka.com)
ಭಾರತದಿಂದ ವಿದೇಶಕ್ಕೆ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ನಾಗರೀಕರು ಶೀಘ್ರವೇ ಕೋವಿಡ್‌ ಲಸಿಕೆಯ ಮೂರನೇ ಡೋಸ್‌ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ತಾವು ಹೋಗಬೇಕಾಗಿರುವ ದೇಶಗಳಲ್ಲಿನ ಮಾರ್ಗಸೂಚಿಗಳಿಗೆ ಅನುಗುಣವಾಗಿ ವಿದೇಶಕ್ಕೆ ಪ್ರಯಾಣಿಸುವ ಭಾರತೀಯರು ಮೂರನೇ ಡೋಸ್‌ ಲಸಿಕೆ ಪಡೆಯಬಹುದಾಗಿದ್ದು ಶೀಘ್ರವೇ ಕೋವಿನ್‌ ವೆಬ್‌ ಸೈಟ್‌ ನಲ್ಲಿ ಈ ವ್ಯವಸ್ಥೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಎರಡನೇ ಡೋಸ್‌ ಪಡೆದು ಒಂಭತ್ತು ತಿಂಗಳು ಪೂರ್ಣವಾಗಿರುವ 18 ವರ್ಷ ಮೇಲ್ಪಟ್ಟವರು ಮಾತ್ರ ಮೂರನೇ ಡೋಸ್‌ ಪಡೆಯಬಹುದು ಎಂದು ಸೂಚಿಸಲಾಗಿತ್ತು. ಆದರೆ ಈಗ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದ್ದು ವಿದೇಶಕ್ಕೆ ಪ್ರಯಾಣಿಸುವವರು ಮೂರನೇ ಡೋಸ್‌ ಪಡೆಯಬಹುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು