9:39 PM Friday14 - March 2025
ಬ್ರೇಕಿಂಗ್ ನ್ಯೂಸ್
ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ… ಮಾತು ಉಳಿಸಿಕೊಂಡ ಸಿದ್ದರಾಮಯ್ಯ ಸರಕಾರ; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ… ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ… Ex CM | ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ:… ಎಲ್ಲರೂ ಬುದ್ದಿ ಹೇಳೋರೆ ಇರೋದು; ಹೊಸಬರು ಹಿರಿಯ ಮಾತು ಕೇಳಿ ಕಲಿಯಿರಿ: ನೂತನ… ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3… DCM | ತುಂಗಭದ್ರ ಆಣೆಕಟ್ಟಿನ 27 ಟಿಎಂಸಿ ನೀರಿನ ಸದ್ಬಳಕೆಗೆ ಸರಕಾರ ಕ್ರಮ:… Traffic Jam | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಡಬಲ್… Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ:…

ಇತ್ತೀಚಿನ ಸುದ್ದಿ

ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸ್ಪೀಕರ್ ಯು.ಟಿ. ಖಾದರ್

14/03/2025, 21:32

ಬೆಂಗಳೂರು(reporterkarnataka.com):ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ಇಂದು ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಸಭಾಧ್ಯಕ್ಷ ಯು. ಟಿ. ಖಾದರ್ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಈ ಅಪಘಾತ ನಡೆದಿದ್ದು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ರುದ್ರಪ್ಪ ಲಮಾಣಿ ರವರು ಅಪಾಯದಿಂದ ಪಾರಾಗಿದ್ದು ಶೀಘ್ರ ಗುಣಮುಖರಾಗಲಿ ಎಂದು ಸಭಾಧ್ಯಕ್ಷ
ಯು ಟಿ ಖಾದರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು