ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ
24/10/2024, 14:29
ಮಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸುವ ಮೂಲಕ ಕೇಸರಿ ಪಡೆ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಜಯ ಸಾಧಿಸಿದ್ದಾರೆ. ಅವರು
ಕಾಂಗ್ರೆಸ್ ನ ರಾಜು ಪೂಜಾರಿ ಅವರನ್ನು ಸೋಲಿಸಿದ್ದಾರೆ.
ಸಂಸದರಾಗಿ ಆಯ್ಕೆಗೊಂಡ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು,ಇಂದು ಮತ ಎಣಿಕೆ ನಡೆಯಿತು.