1:48 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ; ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳಿಂದ ಗೆಲುವು

14/12/2021, 14:12

ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿಯ ಹೋರಾಟದಲ್ಲಿ ಕೊನೆ ಘಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದ ಇಬ್ಬರೂ ಅಭ್ಯರ್ಥಿಗಳ ಮಧ್ಯೆ ಅತ್ಯಂತ ಪೈಪೋಟಿ ಏರ್ಪಟಿದ್ದು, ಅಂತಿಮವಾಗಿ ಆರು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರಾಭವಗೊಂಡರು.

2410 ಮತಗಳ ಪೈಕಿ 39 ಮತಗಳು ಅಸಿಂಧುಗೊಂಡಿತ್ತು. ಎಂ.ಕೆ ಪ್ರಾಣೇಶ 1188 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1182 ಮತಗಳನ್ನು ಪಡೆದುಕೊಂಡರು.

ಕಾಂಗ್ರೆಸ್ ಅಭ್ಯರ್ಥಿ ಆರು ಮತಗಳಿಂದ ಪರಭವಗೊಂಡಿದ್ದರಿಂದ ಚುನಾವಣಾ ಅಧಿಕಾರಿಗಳ ಬಳಿ ಮರು ಮತ ಎಣಿಕೆಗೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮರು ಮತ ಎಣಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು