3:36 PM Tuesday22 - October 2024
ಬ್ರೇಕಿಂಗ್ ನ್ಯೂಸ್
ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ಮಂಗಳೂರು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಚಾರ

19/10/2024, 21:30

ಮಂಗಳೂರು(reporterkarnataka.com): ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಯಿತು.


ಬಾಳೆಪುಣಿ ಪಂಚಾಯತ್, ತುಂಬೆ ಪಂಚಾಯತ್, ಕೊಡ್ಮಣ್ ಪಂಚಾಯತ್, ಪುದು ಪಂಚಾಯತ್, ಅಂಬ್ಲಮೊಗರು ಪಂಚಾಯತ್, ಕುರ್ನಾಡು ಪಂಚಾಯತ್, ಪಜೀರು ಪಂಚಾಯತ್, ಕೋಟೆಕಾರು ಪಟ್ಟಣ ಪಂಚಾಯತ್, ಸೋಮೇಶ್ವರ ಪುರಸಭೆ ಹಾಗೂ ಉಳ್ಳಾಲ ನಗರಸಭೆ ಸದಸ್ಯರ ಮತ್ತು ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.
21ರಂದು ನಡೆಯಲಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಮೂಲ್ಯವಾದ ಮತಗಳನ್ನು ನೀಡುವ ಮೂಲಕ ತಮ್ಮೆಲ್ಲರ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ಗ್ರಾಮ ಸ್ವರಾಜ್ಯದ ಕುರಿತಾಗಿ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳೇ ನಮಗೆ ಶ್ರೀರಕ್ಷೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು