ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆ: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶೇ.100 ಮತದಾನ
11/12/2021, 08:35
ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com
ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಶೇ. 100 ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್ ಕವಿತಾ ಆರ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ ಆರಂಭವಾದ ಮತದಾನ ಸಂಜೆ 5ರ ವರೆಗೆ ನಡೆಯಿತು. ಮತಗಟ್ಟೆಗಳ ಮುಂದೆ ಕೋವಿಡ್ ನಿಯಮದಂತೆ ಸ್ಯಾನಿಟೈಸರ್ ವಿತರಣೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಿಕ್ಕಪುಟ್ಟ ಮಾತಿನ ಚಕಮುಕಿ ಬಿಟ್ಟರೆ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆಯಿತು. ತಾಲೂಕಿನ ಆಡಳಿತ ಪೊಲೀಸ್ ಬಿಗಿ ಭದ್ರತೆಯಲ್ಲಿ ಮತಪೆಟ್ಟಿಗೆಗಳನ್ನು ರಾಯಚೂರಿಗೆ ಕಳುಹಿಸಿಕೊಡಲಾಯಿತು ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿಷ್ಠಿತೆಯಾಗಿರುವ ಈ ಚುನಾವಣೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಯಿತು. ತಹಶೀಲ್ದಾರ್ ಕವಿತಾ ಆರ್.,ಸರ್ಕಲ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಿದ್ದರಾಮೇಶ್ವರ ಬಿದರಾಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮತಗಟ್ಟೆಗಳಿಗೆ ತೆರಳಿ ತಮ್ಮ ಕಾರ್ಯಕರ್ತರನ್ನು ಭೇಟಿಯಾಗಿ ಮತದಾನದ ಪ್ರಮಾಣ ಪಡೆಯುತ್ತಿರುವ ದೃಶ್ಯ ಕಂಡು ಬಂತು.














