ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆ: ಜಗದೀಶ ಶೆಟ್ಟರ್, ಬೋಸರಾಜು, ಕಮಕನೂರು ಅವಿರೋಧ ಆಯ್ಕೆ
24/06/2023, 11:29
ಬೆಂಗಳೂರು(reporterkarnataka.com): ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವಿರೋಧ ಆಯ್ಕೆಯಾಗಿದ್ದಾರೆ.
ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.