ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿ
01/10/2024, 20:57
ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ
ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.
ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಈ ಆಯ್ಕೆ ನಡೆಸಿದೆ. ಸಂಸದರಾಗಿ ಆಯ್ಕೆಯಾದ ಬಳಿಕ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.