ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆ: ನಾಳೆ ಅಧಿಸೂಚನೆ; ಅಕ್ಟೋಬರ್ 3 ನಾಮಪತ್ರ ಸಲ್ಲಿಸಲು ಕೊನೆಯ ದಿನ
25/09/2024, 21:27

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ.
ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.