5:45 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ, ಐವನ್ ಡಿಸೋಜ ಸಹಿತ 7 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

02/06/2024, 17:34

ಬೆಂಗಳೂರು(reporterkarnataka.com):ವಿಧಾನಸಭೆಯಿಂದ ವಿಧಾನ ಪರಿಷತ್‌ ನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ
ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯತೀಂದ್ರ ಸಿದ್ದರಾಮಯ್ಯ, ಐವನ್ ಡಿಸೋಜ ಸೇರಿದಂತೆ 7 ಮಂದಿಗೆ ಟಿಕೆಟ್ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತ ಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರ ಅಭ್ಯರ್ಥಿತನವನ್ನು ಘೋಷಿಸಲಾಗಿದೆ.
ವಿಧಾನ ಪರಿಷತ್ ನ ಒಟ್ಟು 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ವಿಧಾನ ಸಭೆಯಲ್ಲಿ ಸಂಖ್ಯಾಬಲಕ್ಕೆ ಅನುಗುಣವಾಗಿ 7 ಸ್ಥಾನಗಳಲ್ಲಿ ಕಾಂಗ್ರೆಸ್​ ಜಯಗಳಿಸಲಿದೆ. ಆ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಬಂದು ಲೋಕಸಭೆ ಚುನಾವಣೆ ವೇಳೆ ಮತ್ತೆ ಬಿಜೆಪಿಗೆ ಮರಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು