ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಮಾತೃ ವಿಯೋಗ: ಗಣ್ಯರ ಸಂತಾಪ
03/04/2024, 12:24
ಕಾರ್ಕಳ(reporterkarnataka.com): ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ತಾಯಿ ಅಂಬಾ ಸಾವಿತ್ರಿ(96) ಅವರು ಮಂಗಳವಾರ ಕೆರ್ವಾಶೆಯ ಸ್ವಗೃಹದಲ್ಲಿ ನಿಧನರಾದರು.
ಅವರು ಇತ್ತೀಚೆಗೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು 7 ಮಂದಿ ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂಬಾ ಸಾವಿತ್ರಿ ಅವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಹಾಗೂ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮುಂತಾದವರು ಸಂತಾಪ ಸೂಚಿಸಿದ್ದಾರೆ.