5:02 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಗೆ ಸ್ಪರ್ಧಿಸುವುದಾದರೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್

10/11/2021, 22:08

ಉಡುಪಿ(reporterkarnataka.com): ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾದರೆ ನಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ.

ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಸ್ಪರ್ಧಿಸುವ ಕುರಿತು ಎರಡು ಮೂರು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಉಡುಪಿಯಲ್ಲಿ ಬುಧವಾರ ಮಾಧ್ಯಮ ಜತೆ
ಮಾತನಾಡಿದ ಅವರು ನುಡಿದರು.

ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡ ಬರುತ್ತಿರುವುದು ನಿಜ. ಇದು ಪಕ್ಷಗಳ ಮಧ್ಯೆ ನಡೆಯುವ ಚುನಾವಣೆಯಾಗಿದೆ. ನಾನು ಎಲ್ಲ ಪಕ್ಷಗಳ ಮಧ್ಯೆ ಇದ್ದೇನೆ. ಹಾಗಾಗಿ ಸ್ಪರ್ಧಿಸುವ ಬಗ್ಗೆ ಆಲೋಚನೆ ಮಾಡಬೇಕಾಗಿದೆ. ನಾಮಪತ್ರ ಸಲ್ಲಿಸುವುದಿದ್ದರೆ ಕೊನೆಯ ದಿನವಾದ ನ.17ಕ್ಕೆ ಸಲ್ಲಿಸುತ್ತೇನೆ ಎಂದರು.

ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್ತಿನಲ್ಲಿ ಕನಿಷ್ಟ ಎರಡು ಸ್ಥಾನವನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪಕ್ಷಗಳಿಂದ ಆಹ್ವಾನ ಬಂದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದವರು ನನ್ನನ್ನು ಕರೆಯುತ್ತಾರೆ. ಆದರೆ ಹೋಗಬೇಕೆ ಬೇಡವೇ ಎಂಬುದು ನನ್ನ ಇಷ್ಟ. ಆದರೆ ನಾನು ಯಾವುದೇ ಪಕ್ಷದಡಿಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದರು.ನವೋದಯ ಸದಸ್ಯರು, ಗ್ರಾಪಂ ಸದಸ್ಯರು ಹಾಗೂ ಸಹಕಾರಿಗಳು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇರುವ ಶೇ.50ರಷ್ಟು ಮಂದಿ ಗ್ರಾಪಂ ಸದಸ್ಯರುಗಳಾಗಿದ್ದಾರೆ. ಇದರಲ್ಲಿ ಶೇ.30ರಷ್ಟು ಮಂದಿ ಮಹಿಳೆಯರು ನವೋದಯ ಸೇರಿದಂತೆ ಇತರ ಗುಂಪುಗಳಿಗೆ ಸೇರಿದವರಾಗಿದ್ದಾರೆ. ಆದ್ದರಿಂದ ಇವರೆಲ್ಲರು ಸಹಕಾರಿ ಕ್ಷೇತ್ರಕ್ಕೆ ಪ್ರಾತಿನಿಧ್ಯ ಸಿಗಲಿ ಎಂಬ ಉದ್ದೇಶದಿಂದ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇವರು ಸ್ಪರ್ಧೆ ಮಾಡುವಂತೆ ಹೇಳಿದ್ದರೆಯೇ ಹೊರತು ಯಾರು ಕೂಡ ಪಕ್ಷದಿಂದ ಸ್ಪರ್ಧಿಸಿ ಎಂದು ಹೇಳಿಲ್ಲ. ನಾನು ಎಲ್ಲೂ ರಾಜಕೀಯ ಮಾಡುವುದಿಲ್ಲ. ಸಹಕಾರಿ, ಬಡವರ, ಸ್ವಸಹಾಯ ಸಂಘಗಳ ಗುಂಪುಗಳ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು