ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಗೆ ನಾಮನಿರ್ದೇಶನ: ಉಮಾಶ್ರೀ ಸಹಿತ 3 ಮಂದಿಯ ಹೆಸರು ಅಂತಿಮ
16/08/2023, 23:56
ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ.
ಉಮಾಶ್ರೀ, ಎಂ.ಆರ್. ಸೀತಾರಾಮ್ ಹಾಗೂ
ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮೂವರ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ.
ಕಲಾವಿದರ ಕೋಟಾದಡಿ ಉಮಾಶ್ರೀ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ಸುಧಾಮ್ ದಾಸ್ ಅವರ ಹೆಸರು ಅಂತಿಮಗೊಳಿಸಲಾಗಿದೆ.