9:12 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ವಿಧಾನಸಭೆ ಚಳಿಗಾಲದ ಅಧಿವೇಶನ ದಿನಾಂಕ ಶೀಘ್ರದಲ್ಲೇ ಪ್ರಕಟ: ಸ್ಪೀಕರ್ ಯು.ಟಿ.ಖಾದರ್

08/11/2023, 20:24

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು, ಅಧಿವೇಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು.
ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂಬಂಧ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕೈಗೊಂಡ ಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದ ನಂತರ ಸ್ಪೀಕರ್ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶಿವಮೊಗ್ಗದಲ್ಲಿ
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯುವುದು ಖಚಿತ. ಅದಕ್ಕಾಗಿಯೇ ನಾವು ಇಲ್ಲಿಗೆ ಬಂದು ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ಬಾರಿಯ ಅಧಿವೇಶನ ಮಾದರಿಯಾಗಲಿದೆ ಎಂಬ ಭರವಸೆಯಿದೆ. ಅಧಿವೇಶನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು 10 ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ವಿಧಾನಸಭೆ ಮತ್ತು ಪರಿಷತ್ ಸದಸ್ಯರಿಗೂ ಸೌಲಭ್ಯ ಕಲ್ಪಿಸಲು ಸೂಚನೆ ನೀಡಲಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು