6:48 PM Monday15 - September 2025
ಬ್ರೇಕಿಂಗ್ ನ್ಯೂಸ್
ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಅವಿಭಜಿತ ದ.ಕ. ಜಿಲ್ಲೆಯಿಂದ ಶ್ಯಾಮಲಾ ಕುಂದರ್ ಕಣಕ್ಕಿಲಿಸಲು ಬಿಜೆಪಿ ಒಲವು?

09/10/2022, 11:21

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info. reporterKarnataka@gmail.com
ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗ ರಂಗೇರಲಾರಂಭಿಸಿದೆ. ಒಂದು ಕಡೆ ಆಡಳಿತರೂಢ ಬಿಜೆಪಿ ಅಧಿಕಾರ ಉಳಿಸಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೇರಲು ಹೋರಾಟ ನಡೆಸುತ್ತಿದೆ. ಯಾರೂ ಅಧಿಕಾರಕ್ಕೇರಬೇಕಾದರೂ ಕರಾವಳಿ ಕರ್ನಾಟಕದ ಜನಾಭಿಪ್ರಾಯ ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ಪ್ರಮುಖ ಪಕ್ಷಗಳು ಮತ್ತೊಮ್ಮೆ ಕರಾವಳಿಯತ್ತ ಚಿತ್ತ ಹರಿಸಿದೆ.
ಹಿಂದುತ್ವವನ್ನೇ ಪ್ರಮುಖ ಅಸ್ತ್ರವಾಗಿ ಉಪಯೋಗಿಸುತ್ತಿರುವ ಬಿಜೆಪಿ ಈ ಬಾರಿ ಹಿಂದುತ್ವದ ಜತೆ ಸಾಮಾಜಿಕ ನ್ಯಾಯದ ಕಡೆಗೂ ದೃಷ್ಟಿ ಬೀರಲಿದೆ ಎಂಬ ಮಾಹಿತಿ ಪಕ್ಷದ ಕೆಲವು ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲು ಚಿಂತನೆ ನಡೆಸಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯಿಂದ ತಲಾ ಒಂದು ಕ್ಷೇತ್ರವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ. ಇದರಲ್ಲಿ ಒಂದು ಕ್ಷೇತ್ರದ ಅಭ್ಯರ್ಥಿಯನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಅವರು ಯಾರೆಂದರೆ ಉಡುಪಿ ಜಿಲ್ಲೆಯ ಶ್ಯಾಮಲಾ ಕುಂದರ್ ಅವರು. ಕರಾವಳಿ ಮಾತ್ರವಲ್ಲ ರಾಜ್ಯಮಟ್ಟದಲ್ಲಿಯೂ ಶ್ಯಾಮಲಾ ಕುಂದರ್ ಅವರದ್ದು ಬಹಳ ದೊಡ್ಡ ಹೆಸರು.
ಕಾರ್ಕಳ ಮೂಲದ ಶ್ಯಾಮಲಾ ಕುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಮಾತ್ರವಲ್ಲ ಇಡೀ ದಕ್ಷಿಣ ಭಾರತದ ಉಸ್ತುವಾರಿಯಾಗಿ ಕೆಲಸ ಮಾಡಿದವರು. ಸುಮಾರು 25 ವರ್ಷಗಳಿಂದ ಸಕ್ರೀಯ ರಾಜಕೀಯದಲ್ಲಿ ತೊಡಗಿರುವ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುವ ಮೂಲಕ ಹಂತ ಹಂತವಾಗಿ ಮೇಲೇರಿದ ರಾಜಕೀಯ ಅನುಭವಿ. ತನ್ನ ರಾಜಕೀಯ ಜೀವನದುದ್ಧಕ್ಕೂ ದಕ್ಷತೆಯನ್ನು ಕಾಪಾಡಿಕೊಂಡು ಬಂದು ಶುದ್ಧ ಹಸ್ತರೆಂಬ ಖ್ಯಾತಿ ಪಡೆದವರು. ಈ ಕಾರಣದಿಂದಲೇ ಬಿಜೆಪಿ ಹೈಕಮಾಂಡಿಗೂ ಶ್ಯಾಮಲಾ ಕುಂದರ್ ಎಂದರೆ ಬಲು ಅಚ್ಚು ಮೆಚ್ಚು. ಪಕ್ಷದ ರಾಜ್ಯ ಕೋರ್ ಕಮಿಟಿ, ಹೈಕಮಾಂಡ್ ಇವರ ಅಭ್ಯರ್ಥಿತನಕ್ಕೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು