ಇತ್ತೀಚಿನ ಸುದ್ದಿ
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಲ್ಲಿ 8 ಸಾವಿರ ಅರ್ಜಿ: ಮಂಗಳೂರು ಉತ್ತರದಿಂದ ಬಾವಾ, ದಕ್ಷಿಣದಿಂದ ಐವನ್ ಸಲ್ಲಿಕೆ
16/11/2022, 20:12

ಮಂಗಳೂರು(reporterkarnataka.com): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ತೀವ್ರಗೊಂಡಿದ್ದು, ಇದುವರೆಗೆ 8 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 6 ತಿಂಗಳು ಬಾಕಿ ಉಳಿದಿದ್ದು, ಆಕಾಂಕ್ಷಿಗಳ ಸಂಖ್ಯೆ ದಿನ ಕಳೆದಂತೆ ವೃದ್ಧಿಯಾಗಲಾರಂಭಿಸಿದೆ. ಕಾಂಗ್ರೇಸ್ ನಲ್ಲಿ ಈಗಾಗಲೇ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಪಕ್ಷದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು, ಇದೀಗ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದ 224 ಕ್ಷೇತ್ರಗಳಿಗೆ 8000 ಅರ್ಜಿಗಳು ಸಲ್ಲಿಕೆಯಾಗಿದೆ. ಒಟ್ಟು 1150 ಅರ್ಜಿಗಳು ಆಕಾಂಕ್ಷಿಗಳು ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಐವನ್ ಡಿಸೋಜ ಮತ್ತು ಮಂಗಳೂರು ಉತ್ತರಕ್ಕೆ ಮೊಯಿದೀನ್ ಬಾವಾ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ 2 ಲಕ್ಷ ರೂ. ವಾವತಿಸಬೇಕು.