1:25 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವಿಧಾನಸಭೆ ಉಪ ಚುನಾವಣೆ: ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

08/11/2024, 21:19

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.
ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ, ನ.11 ರ ಸಂಜೆ 6 ಗಂಟೆಯಿಂದ ನ.13 ಸಂಜೆ 6.30 ಗಂಟೆಯವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
*ಎಕ್ಸಿಟ್ ಪೋಲ್ ನಿಷೇಧ:*
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು