3:18 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ; ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ

08/05/2023, 11:01

ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಸಂಬಂಧಿಸಿದ ಜಿಲ್ಲಾ ಅಥವಾ ರಾಜ್ಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಜಿಲ್ಲೆಯ ಚುನಾವಣಾ ಕಣದಲ್ಲಿರುವ ಅಭ್ಯøರ್ಥಿಗಳು ತಮ್ಮ ಚುನಾವಣಾ ಜಾಹೀರಾತನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ ನಿಗಧಿತ ಅನುಬಂಧ-ಸಿ ಅರ್ಜಿ ನಮೂನೆಯೊಂದಿಗೆ ಎರಡು ಸ್ವಯಂ ದೃಢೀಕೃತ ಜಾಹೀರಾತು ಪ್ರತಿಗಳನ್ನು ಸಲ್ಲಿಸಿ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸುವುದು ಕಡ್ಡಾಯವಾಗಿರುತ್ತದೆ.

ಇನ್ನು ಚುನಾವಣಾ ಬಹಿರಂಗ ಪ್ರಚಾರ ಮೇ 8 ರಂದು ಸಂಜೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಎಂದಿನಂತೆ ಜಿಲ್ಲಾ ಎಂ.ಸಿ.ಎಂ.ಸಿ. ಸಮಿತಿಯಿಂದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗೆ ಮೇ 8 ರ ಸಂಜೆ 5 ಗಂಟೆ ವರೆಗಿನ ಅವಧಿಗೆ ಮಾತ್ರ ಸುದ್ದಿ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಜಾಹೀರಾತು ಪ್ರಚಾರ ಪಡಿಸಲು ಸಮಿತಿಯಿಂದ ಪೂರ್ವಾನುಮತಿ ನೀಡಲಾಗುತ್ತದೆ.
ಇನ್ನು ಪತ್ರಿಕೆಗಳು ಮೇ 9 ಮತ್ತು 10ರಂದು ಯಾವುದೇ ಚುನಾವಣಾ ಜಾಹಿರಾತುಗಳನ್ನು ಪ್ರಕಟಿಸುವ ಮುನ್ನ ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯಲಾಗಿದಿಯೇ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕವೇ ಜಾಹೀರಾತು ಪ್ರಕಟಿಸಬೇಕು. ಅನುಮತಿ ಇಲ್ಲದೆ ಹೋದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ.
ಮತದಾನದ ಪೂರ್ವ 72 ಗಂಟೆ ಅವಧಿಯಲ್ಲಿ ಬಿತ್ತರಿಸುವ ಸುದ್ದಿ, ಪ್ರಸಾರಗಳ ಮೇಲೆ ಚುನಾವಣ ಆಯೋಗ ತೀವ್ರ ನಿಗಾ ವಹಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು