7:59 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ವಿಧಾನ ಸಭೆಯಲ್ಲಿ ಕನ್ನಡ ವಿಧೇಯಕ ಮಂಡನೆ: ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ

23/09/2022, 22:11

ಬೆಂಗಳೂರು(reporterkarnataka.com): ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ  ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಕನ್ನಡ  ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್ ವಿಧೇಯಕವನ್ನು ಮಂಡಿಸಿದ್ದು, ಆಡಳಿತ ಕನ್ನಡ ಜಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದು ಸೇರಿದಂತೆ ಶಿಸ್ತು ಕ್ರಮಗಳ ಅನುಷ್ಠಾನಕ್ಕಾಗಿ ವಿವಿಧ ಹಂತಗಳಲ್ಲಿ ಜಾರಿ ಪ್ರಾಧಿಕಾರ ರಚನೆ ಮಾಡುವುದಕ್ಕೆ ಈ ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ ಎಂದರು.

ಮುಖ್ಯವಾಗಿ ರಾಜ್ಯದಲ್ಲಿ ಭೂಮಿ, ತೆರಿಗೆ ರಿಯಾಯಿತಿ, ಅನುದಾನ ಹಾಗೂ ಇತರೆ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು, ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ಕಾಯಿದೆಯ ಮೇಲ್ವಿಚಾರಣೆಗೂ ಈ ವಿಧೇಯಕ ಬಲ ನೀಡಲಿದೆ.

*ಕಾಯಿದೆಯ ಮುಖ್ಯಾಂಶಗಳು

೧ ಉನ್ನತ, ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಪರಿಚಯಿಸಿ ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವುದು.

೨ . ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉನ್ನತ , ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಮೀಸಲು ಸೌಲಭ್ಯ.

೩. ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರ, ಶಾಸನಬದ್ಧ ಸಂಸ್ಥೆಗಳು, ಸಹಕಾರ ಸಂಘಗಳ ನೇಮಕ ಪ್ರಕ್ರಿಯೆಯಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ.

೪. ಅಧೀನ ನ್ಯಾಯಾಲಯ ಹಾಗೂ ನ್ಯಾಯ ಮಂಡಳಿಗಳಲ್ಲಿ ಕನ್ನಡ ಭಾಷಾ ಬಳಕೆ.

೫. ಕನ್ನಡದ ಬಳಕೆ ಮತ್ತು ಪ್ರಸಾರಕ್ಕೆ ನೀತಿ.

೬. ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶದಲ್ಲಿ ಕನ್ನಡ ಬಳಕೆಗೆ ಕ್ರಮ.

೭ . ರಾಜ್ಯ ಸರಕಾರದಿಂದ ತೆರಿಗೆ ರಿಯಾಯಿತಿ ಹಾಗೂ ಇತರೆ ಸೌಲಭ್ಯ ಪಡೆದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವುದು.

೮. ಉದ್ಯೋಗ ಪೋರ್ಟಲ್ ಸ್ಥಾಪನೆ.

೯ . ಅನುಷ್ಠಾನಗಳ ಮೇಲ್ವಿಚಾರಣೆಗೆ ಕಾರ್ಯ ವ್ಯವಸ್ಥೆ ಸ್ಥಾಪನೆ.

ದಂಡ ವ್ಯವಸ್ಥೆ: ಇದೆಲ್ಲಕ್ಕಿಂತ ಮುಖ್ಯವಾಗಿ ಕನ್ನಡ ಅನುಷ್ಠಾನ ಉಲ್ಲಂಘನೆ ಮಾಡಿದ ವ್ಯಕ್ತಿ, ಸಂಘ- ಸಂಸ್ಥೆಗಳಿಗೆ ಈ ಕಾಯಿದೆಯ ಮೂಲಕ ದಂಡ ವಿಧಿಸುವ ಉಪಬಂಧವನ್ನು ಈ ಕಾಯಿದೆಯ ಮೂಲಕ ಪರಿಚಯಿಸಲಾಗುತ್ತಿದೆ. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ ಖಾಸಗಿ ವ್ಯಕ್ತಿ, ಕಾರ್ಖಾನೆ, ಸಂಘಟನೆಗಳಿಗೆ  ೫೦೦೦ ರೂ, ಎರಡನೇ ಬಾರಿಗೆ 10,000 ರೂ. ಹಾಗೂ ಮೂರನೇ ಬಾರಿಗೆ ತಪ್ಪೆಸಗಿದವರಿಗೆ ೨೦, ೦೦೦ ರೂ.ವರೆಗೆ ದಂಡ ವಿಧಿಸುವ ಅಧಿಕಾರವನ್ನು ವಿವಿಧ ಹಂತದಲ್ಲಿ ಜಾರಿಗೆ ತರುವ ಅಧಿಕಾರ ಜಾರಿ ಪ್ರಾಧಿಕಾರಕ್ಕೆ ನೀಡಲಾಗುತ್ತದೆ. ಸರಕಾರಿ ಅಧಿಕಾರಿಗಳು ಕನ್ನಡ ಜಾರಿ ವಿಚಾರದಲ್ಲಿ ಎಸಗುವ ತಪ್ಪನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ.

ಪ್ರೋತ್ಸಾಹ: ಇ ಆಡಳಿತ ಇಲಾಖೆಯಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯ ಪರಿಣಾಮಕಾರಿ ಅಭಿವೃದ್ಧಿಗಾಗಿ ಸರಕಾರಕ್ಕೆ ಸೃಜನಾತ್ಮಕ ಸಲಹೆ ನೀಡುವ ವ್ಯಕ್ತಿಗಳಿಗೆ ಪ್ರೋತ್ಸಾಹ ನೀಡುವುದಕ್ಕೂ ಈ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು