3:46 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿದ ನಳಿನ್ ಕುಮಾರ್ ಕಟೀಲಿಗೆ ಟಿಕೆಟ್ ಇಲ್ಲ!: ಶೋಭಾ ಕರಂದ್ಲಾಜೆ ಬೆಂಗಳೂರಿಗೆ ಶಿಫ್ಟ್!

14/03/2024, 07:07

ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದೆ. ಕ್ಯಾಪ್ಟನ್ ಬ್ರಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕಾರ್ಯಕರ್ತರ ಭಾರೀ ವಿರೋಧದ ಹಿನ್ನೆಲೆಯಲ್ಲಿ ನಳಿನ್ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಟಿಕೆಟ್ ಪಡೆದ 20 ಅಭ್ಯರ್ಥಿಗಳು ವಿವರ

*ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ

*ಬಾಗಲಕೋಟೆ- ಪಿ.ಸಿ. ಗದ್ದಿಗೌಡರ

*ಕಲಬುರಗಿ- ಉಮೇಶ್ ಜಾಧವ್

*ಬೀದರ್- ಭಗವಂತ ಖೂಬಾ

*ಬಿಜಾಪುರ- ರಮೇಶ್ ಜಿಗಜಿಣಗಿ

*ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್

*ಬಳ್ಳಾರಿ- ಶ್ರೀರಾಮುಲು

*ಹಾವೇರಿ- ಬಸವರಾಜ ಬೊಮ್ಮಾಯಿ

*ಧಾರವಾಡ- ಪ್ರಹ್ಲಾದ್ ಜೋಶಿ

*ದಾವಣಗೆರೆ- ಗಾಯತ್ರಿ ಸಿದ್ದೇಶ್ವರ

*ಶಿವಮೊಗ್ಗ- ಬಿ.ವೈ. ರಾಘವೇಂದ್ರ

“ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟ

*ತುಮಕೂರು – ವಿ. ಸೋಮಣ್ಣ

*ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

*ಚಾಮರಾಜನಗರ- ಎಸ್. ಬಸವರಾಜು

“ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್

*ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ

*ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್

*ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

ಇತ್ತೀಚಿನ ಸುದ್ದಿ

ಜಾಹೀರಾತು