11:11 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಮತದಾನದ 48 ತಾಸು ಮುನ್ನ ಚುನಾವಣಾ ಚರ್ಚೆ, ಸಂವಾದ, ಎಕ್ಸಿಟ್ ಪೋಲ್ ನಿಷೇಧ

08/05/2023, 11:04

ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ 48 ಗಂಟೆ ಮುನ್ನ ಅವಧಿಯಲ್ಲಿ ಅಂದರೆ (ಮೇ 8ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ಗಂಟೆ ವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಟಿ.ವಿ. ವಾಹಿನಿಗಳಲ್ಲಿ, ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125ರಂತೆ ನಿಬರ್ಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಜಾಹೀರಾತು,ಸಮೀಕ್ಷೇ ಇತ್ಯಾದಿ ಸುದ್ದಿಗಳನ್ನು ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಇತ್ಯಾದಿಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ಸಮೀಕ್ಷೆ ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
ಎಕ್ಸಿಟ್ ಪೋಲ್ ನಿಷೇಧ:
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು