7:41 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು