5:37 PM Sunday29 - December 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಆಗ್ರಹಿಸಿ ರೈತ ಸಂಘ ಮತ್ತು… ಜನಪ್ರತಿನಿಧಿಗಳು ಸದನದ ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು: ಸ್ಪೀಕರ್ ಖಾದರ್ ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ  ದ್ವಿತೀಯ ಪಿಯುಸಿ ಪರೀಕ್ಷೆ ಅನಿವಾರ್ಯ: ಶಿಕ್ಷಣ ಸಚಿವ ಸುರೇಶ್ ಕುಮಾರ್

23/05/2021, 23:24

ಬೆಂಗಳೂರು(reporterkarnataka news) : ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಉಚಿತ. ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಭಾನುವಾರ ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸುರೇಶ್ ಕುಮಾರ್,

ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ಪ್ರತಿಪಾದಿಸಿದರು.

ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ರಾಜ್ಯ ಸರ್ಕಾರವು ಯೋಜಿಸಿದೆ ಎಂದರು.

ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ಮಾಹೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಿನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ಮಾಹೆಯ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು. 

ಸಭೆಯಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು