3:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ತ್ರಿಬಲ್ ರೈಡ್ : ಮೀಯಪದವಿನಲ್ಲಿ ಶಾಲಾ ಬಸ್ಸಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು

13/01/2023, 19:04

ಕಾಸರಗೋಡು(reporterkarnataka.com) ಜಿಲ್ಲೆಯ ಮಂಜೇಶ್ವರ ಬಳಿಯ ಮೀಯಪದವು ಸಮೀಪ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಮಂಜೇಶ್ವರ ಮೀಯಪದವಿನ ಮೀಂಜ ಬಾಳಿಯೂರು ಬಳಿ ಈ ದುರ್ಘಟನೆ ನಡೆದಿದೆ.
ಮಂಗಳೂರು ಶ್ರೀದೇವಿ ಹಾಗೂ ಪ್ರೇರಣ ಕಾಲೇಜು ವಿದ್ಯಾರ್ಥಿಗಳಾದ ಪ್ರಿತೇಶ್, ಅಭಿ ಹಾಗೂ ನಮಿತ್ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೀಡಾಗಿದೆ.


ಪ್ರಿತೇಶ್ ಹಾಗೂ ಅಭಿ ಇಬ್ಬರೂ ಸಾವನ್ನಪ್ಪಿದ್ದರೆ, ಇನ್ನೊಬ್ಬ ನಮಿತ್ ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಾಲೇಜಿನ ಮೂವರು ವಿದ್ಯಾರ್ಥಿಗಳು ಒಂದೇ ಬೈಕಿನಲ್ಲಿ ಹೆಲ್ಮಟ್ ಕೂಡ ಧರಿಸದೇ ಅತೀ ವೇಗವಾಗಿ ರೈಡ್ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.
ಇನ್ನು ಅಪಘಾತದ ದೃಶ್ಯಗಳು ಇಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು