5:58 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳೇ… ಆಲ್ ದಿ ಬೆಸ್ಟ್: ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

18/06/2022, 09:30

ಬೆಂಗಳೂರು(reporterkarnataka.com): ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ.

ಪಿಯು ಬೋರ್ಡ್ ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದೆ.
ಪದವಿ ಪೂರ್ವ ಶಿಕ್ಷಣ ಮಂಡಳಿಯು, 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದಂತ ದ್ವಿತೀಯ ಪಿಯುಸಿಯ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಮುಕ್ತಾಯವಾಗಿದೆ. ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸೋದಾಗಿ ತಿಳಿಸಿದೆ.

ಅಂದಹಾಗೆ ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್‌ 25 ರೊಳಗೆ ಪ್ರಕಟಿಸೋದಾಗಿ ಹೇಳಿತ್ತು. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು