8:41 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ

10/09/2021, 08:11

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ಆಗ್ರಹಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರನ್ನು ಭೇಟಿಯಾಗಿ ಅವರು ಸಾಂತ್ವಾನ ಹೇಳಿದರು.

ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು ಕೇಸ್‌ನಲ್ಲಿ ಸೇರಿಸಿರುವುದು ದುರದೃಷ್ಟಕರ. ಇದು ಅವರನ್ನು ಹೆದರಿಸಿ , ಮೊಕದ್ದಮೆ ವಾಪಸ್ ಪಡೆಯುವಂತೆ ಮಾಡಲು ಮಾಡಿರುವ ತಂತ್ರವಾಗಿದೆ.

ಪೊಲೀಸರು ಅಮಾಯಕ ಹೆಣ್ಣು ಮಕ್ಕಳನ್ನು ಕೇಸ್‌ನಲ್ಲಿ ಸೇರಿಸಿ ಮಾನಸಿಕ ಹಿಂಸೆ ನೀಡುವುದು ಸರಿಯಲ್ಲ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ತೆಲಂಗಾಣ ಪೊಲೀಸರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಅಂಥ ಧೈರ್ಯ ಪ್ರದರ್ಶಿಸಬೇಕಾಗಿದೆ ಎಂದು ಹೇಳಿದರು. 

ವಿಳಾಸ ಗೊತ್ತಿದೆ , ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಹೀಗಿದ್ದೂ , ಅವರನ್ನು ಹಿಡಿಯದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ. ಆದ್ದರಿಂದ ಎರಡು ದಿನಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ಡಿವೈಎಸ್ಪಿ ಕೆ.ಸಿ.ಗಿರಿ, ತಾಲ್ಲೂಕು ವೈದ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಆಸ್ಪತ್ರೆ ಆಡಳಿತಾಧಿಕಾರಿ ಡಿ . ಶ್ರೀನಿವಾಸ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್ , ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ , ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು