6:40 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ಏಪ್ರಿಲ್ 11ರಂದು ಮಂಗಳೂರಿನ ಮೆಸ್ಕಾಂ ಕೇಂದ್ರ ಕಚೇರಿಗೆ ಮುತ್ತಿಗೆ

08/04/2022, 11:08

ಮಂಗಳೂರು(reporterkarnataka.com): ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಪೆಟ್ರೋಲ್ , ಡೀಸಲ್, ಅಡುಗೆ ಅನಿಲ ಸೇರಿದಂತೆ ಪ್ರತಿಯೊಂದು ದಿನಬಳಕೆಯ ವಸ್ತುಗಳ ವಿಪರೀತ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗಿರುವ ರಾಜ್ಯದ ಜನರ ಮೇಲೆ ಈಗ ವಿದ್ಯುತ್ ದರವನ್ನು ಕೂಡ ಏರಿಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರಕಾರವು ಜನರ ಗಾಯದ ಮೇಲೆ ಬರೆ ಎಳೆದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.

ಗೃಹ ಬಳಕೆಯ ವಿದ್ಯುತ್ ದರದಲ್ಲಿ ಪ್ರತಿ ಯೂನಿಟಿಗೆ 20ರಿಂದ 30 ಪೈಸೆ ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ದರಗಳ ಮೇಲೆ ಪ್ರತಿ ಯುನಿಟಿಗೆ 15ರಿಂದ 25 ಪೈಸೆ ಯಷ್ಟು ಏರಿಕೆ ಮಾಡಿ ಏಪ್ರಿಲ್ ಒಂದರಿಂದ ಜಾರಿಗೊಳಿಸಲು ಮುಂದಾಗಿದೆ. ಈಗಾಗಲೆ ಕಳೆದೆರಡು ವರುಷಗಳಿಂದ ಜನರ ಯಾವುದೇ ವಿರೋಧವನ್ನು ಪರಿಗಣನೆಗೆ ತೆಗೆದುಕೊಳ್ಳದೆ ನಿರಂತರ ವಿದ್ಯುತ್ ದರವನ್ನು ಏರಿಕೆಗೊಳಿಸಿದೆ. ಲಾಕ್ಡೌನ್ ನಂತರ ಜನ ತಮ್ಮ ಆದಾಯದ ಮೂಲಗಳೆಲ್ಲವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಇಲ್ಲದೆ ಮತ್ತು ಇರುವ ಉದ್ಯೋಗಕ್ಕೆ ಸರಿಯಾದ ವೇತನವನ್ನು ಪಡೆಯಲಾಗದೆ ಸಂಕಷ್ಟದಲ್ಲಿದ್ದಾರೆ.

ಪೆಟ್ರೋಲ್ ಡೀಸೆಲ್ ನಿಂದ ಹಿಡಿದು ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಗಳಿಂದ ಕಂಗೆಟ್ಟಿರುವ ಜನಸಾಮಾನ್ಯರು ಇದೀಗ ವಿದ್ಯುತ್ ದರ ಏರಿಕೆಯಿಂದ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದಾರೆ. ಈ ರೀತಿಯ ವಿಪರೀತ ಬೆಲೆ ಏರಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಈ ಹಿನ್ನಲೆಯಲ್ಲಿ  ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಹಾಗು ಏರಿಕೆ ಮಾಡಿದ ದರವನ್ನು ಕೂಡಲೇ ವಾಪಸ್ಸು ಪಡೆಯಲು ಒತ್ತಾಯಿಸಿ ಏಪ್ರಿಲ್ 11ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೈ ಬಳಿ ಇರುವ ಮೆಸ್ಕಾಂ ಕೇಂದ್ರ ಕಚೇರಿಗೆ ಡಿವೈಎಫ್ಐ, ಎಸ್ಎಫ್ಐ ಮತ್ತು ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಎಂದು ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ. ಕೆ ಇಮ್ತಿಯಾಜ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು