ಇತ್ತೀಚಿನ ಸುದ್ದಿ
ವಿದ್ಯುತ್ ಕಣ್ಣಾಮುಚ್ಚಾಲೆ: ಚಳ್ಳಕೆರೆ ಬೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರ ಮುತ್ತಿಗೆ; ಪ್ರತಿಭಟನೆ
06/02/2025, 20:39

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ವಿದ್ಯುತ್ ಕಣ್ಣಾಮುಚ್ಚಾಲೆ ಹಿನ್ನೆಲೆಯಲ್ಲಿ ಚಳ್ಳಕೆರೆಯ ಬೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಇಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ವರವು ಗ್ರಾಮದಲ್ಲಿ ಕಳೆದ ದಿನಗಳಿಂದ ವಿದ್ಯುತ್ ಸಂಪರ್ಕ ಸಮಸ್ಯೆ ಉಂಟಾಗಿದ್ದು ಗ್ರಾಮಸ್ಥರಿಗೂ ಹಾಗೂ ಎಸ್ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸಿರುವ ಕಾರಣ ತುಂಬಾ ಸಮಸ್ಯೆಯಾಗಿ ಉಂಟಾಗಿದೆ. ಸಾಯಂಕಾಲ ಸಮಯ 6 ಗಂಟೆಗೆ ಹೋಗಿದ್ದು ಬೆಳಗಿನ ಜಾವ 3 ಗಂಟೆಗೆ ಬರುತ್ತದೆ.
ಅದಕ್ಕೋಸ್ಕರ ನಮ್ಮ ಸಮಸ್ಯೆಯನ್ನು ಮನವಿ ಪತ್ರ ಸ್ವೀಕಾರ ಮಾಡಿ ವಿದ್ಯುತ್ ಸಂಪರ್ಕ ಕೊಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ. ನಮ್ಮ ಮನವಿಗೆ ಸ್ಪಂದಿಸದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಯ ಉಪಾಧ್ಯಕ್ಷರಾದ ಬಿ ರೆಡ್ಡಿಹಳ್ಳಿ ವೀರಣ್ಣ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.