7:02 PM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ

08/11/2023, 18:28

ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ, ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು.
ಮಂಗಳೂರಿನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಸುನಿಲ್ ಕುಮಾರ್ ಬಜಾಲ್, ಎಚ್ ವಿ.ರಾವ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸೀತಾರಾಮ ಬೇರಿಂಜ, ಜಯಂತಿ ಶೆಟ್ಟಿ, ಸಂತೋಷ್ ಬಜಾಲ್, ಎಂ.ದೇವದಾಸ್ ಅವರು ಮಾತನಾಡಿದರೆ, ಗುರುಪುರ ಕೈಕಂಬದಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಮುನೀರ್ ಕಾಟಿಪಳ್ಳ, ಸದಾಶಿವದಾಸ್, ನೋಣಯ್ಯ ಗೌಡ, ಮನೋಜ್ ವಾಮಂಜೂರು‌ ಅವರು ಮಾತನಾಡಿದರು. ತೊಕ್ಕೊಟುನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ಜಯಂತ ನಾಯಕ್, ಕ್ರಷ್ಣಪ್ಪ ಸಾಲ್ಯಾನ್, ರೋಹಿದಾಸ್ ಭಟ್ನಗರರವರು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು