2:53 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು: ತೆಂಗಿನ ಕಾಯಿ ಕೀಳುವಾಗ ದುರ್ಘಟನೆ

27/11/2023, 10:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ. ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು ಕೂಡ ತೀವ್ರವಾದಂತ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು