5:10 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ

19/10/2024, 19:38

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ತಲಪಾಡಿಯ ದೇವಿ ನಗರದಲ್ಲಿರುವ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಸಮೂಹ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಂತ್ಯ ಮತ್ತು ಕ್ಷೇತ್ರ ಮಟ್ಟದ ವಿಜ್ಞಾನ ಮೇಳ ಅಕ್ಟೋಬರ್ 16, 17,18ರಂದು ನಡೆಯಿತು. ಈ ಪ್ರಾಂತ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಸೊಪ್ಪು ಗುಡ್ಡೆಯಲ್ಲಿ ಇರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೇವಾ ಭಾರತಿಯ 7ನೇ ತರಗತಿ ವಿದ್ಯಾರ್ಥಿ ನಹುಷ್ ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಪ್ರಥಮ ಸ್ಥಾನ ಪಡೆದು ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಈ ಪ್ರತಿಭಾನ್ವಿತ ವಿದ್ಯಾರ್ಥಿಯು ಕುರುವಳ್ಳಿಯ ನಾಗರತ್ನ ಹಾಗೂ ದಯಾನಂದ ದಂಪತಿಯ ಪುತ್ರ. ಕ್ಷೇತ್ರ ಮಟ್ಟದ ಸ್ಪರ್ಧೆಯು ಇದೇ ತಿಂಗಳ 19, 20 ರಂದು ತಲಪಾಡಿಯ ಶಾರದಾ ವಿದ್ಯಾ ಸಂಸ್ಥೆಯಲ್ಲಿಯೇ ನಡೆಯಲಿದೆ.ಕ್ಷೇತ್ರ ಮಟ್ಟದಲ್ಲಿಯೂ ಗೆದ್ದು ರಾಷ್ಟ್ರದ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಸೇವಾ ಭಾರತಿ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು