8:45 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ವಿಜಯಪುರ ಬಸವನ ಬಾಗೇವಾಡಿ: ಇವಿಎಂ, ವಿವಿ ಪ್ಯಾಟ್ ಧ್ವಂಸ; ಸುಮಾರು 25 ಮಂದಿ ಪೊಲೀಸ್ ವಶಕ್ಕೆ

10/05/2023, 19:26

ವಿಜಯಪುರ(reporterkarnataka.com): ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿ ಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಈ ಸಂಬಂಧ ಸುಮಾರು 25 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮತಗಟ್ಟೆ ಅಧಿಕಾರಿಗಳ ವಾಹನಗಳಿಗೆ ಉದ್ರಿಕ್ತರು ಹಾನಿ ಮಾಡಿದ್ದಾರೆ.
ಕಾರಿನಲ್ಲಿ
ಹೆಚ್ಚುವರಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಸಾಗಿಸುತ್ತಿದ್ದಾಗ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಉದ್ರಿಕ್ತ ಜನರು ಆಕ್ರೋಶಗೊಂಡು ಇವಿಎಂಗಳನ್ನು ಒಡೆದು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ 20-25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರದ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಇವರನ್ನು ಕರೆತಂದಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು