7:38 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ವಿಜಯಪುರ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ ಟಾಯ್ಲೆಟ್ ನಲ್ಲಿ ನೇಣಿಗೆ ಶರಣು; ಠಾಣೆಗೆ ಮುತ್ರಿಗೆ

29/08/2021, 18:56

ವಿಜಯಪುರ(reporterkarnataka.com): ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಬಂಧಿಸಲಾಗಿದ್ದ ಯುವಕ ಭಾನುವಾರ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಶನಿವಾರ ತಡರಾತ್ರಿ ಬಂಧಿಸಲಾಗಿತ್ತು. ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆಯ ತಂದೆ ದೂರು ಸಲ್ಲಿಸಿದ್ದರು. ಇದರ ಅನ್ವಯ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು. 

ವಿಚಾರಣೆ ವೇಳೆ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಶೌಚಾಲಯಕ್ಕೆ ತೆರಳಿದ್ದ ವ್ಯಕ್ತಿ ಧರಿಸಿದ್ದ ಪ್ಯಾಂಟ್‌ನಿಂದ ನೇಣು ಹಾಕಿಕೊಂಡಿದ್ದಾನೆ.

ಪೊಲೀಸರ ನಿರ್ಲಕ್ಷ್ಯದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಆರೋಪಿಯ ಪೋಷಕರು, ಸಂಬಂಧಿಕರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು