10:04 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್ ಮೆರವಣಿಗೆ; ಸಹಸ್ರ ಸಹಸ್ರ ಕಾರ್ಯಕರ್ತರು ಸಾಥ್

17/04/2024, 07:48

ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ತಮ್ಮ ಸಾವಿರಾರು ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.


ಜಿಲ್ಲೆಯ ಇಬ್ಬರು ಸಚಿವರು, ಕಾಂಗ್ರೆಸ್ ನ ಎಲ್ಲ ಶಾಸಕರು, ನೂರಾರು ಮುಖಂಡರು, ಸಹಸ್ರ ಸಹಸ್ರ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ಬಂದ ಅವರು ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೊಳಿ, ನಾಗಠಾಣಾ ಶಾಸಕ ವಿಠ್ಠಲ ಕಟಕದೊಂಡ, ಪಕ್ಷದ ನಾಯಕ
ಹಮೀದ್ ಮುಶ್ರಿಫ್ ಹಾಗೂ
ವಿಜಯಪುರ ತಾಲೂಕಿನ ಶಿರನಾಳದ ಯುವ ಮುಖಂಡ ಭೀಮಣ್ಣ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೆ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಅಲಗೂರ ಅವರು ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು. ತೆರೆದ ವಾಹನದಲ್ಲಿ ರಾಜು ಅಲಗೂರ ಹಾಗೂ ಪಕ್ಷದ ನಾಯಕರು ಮೆರವಣಿಗೆಯಲ್ಲಿ ಸಾಗಿದರು. ಮಹಿಳೆಯರು, ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಲಂಬಾಣಿ ನೃತ್ಯ ನಡೆಯಿತು. ದಾರಿಯ ಮಧ್ಯದಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಪ್ರಧಾನಿ ಮೋದಿ ಅವರು ಅಚ್ಚೇ ದಿನ್ ಅಂತ ಹೇಳಿ ಅಧಿಕಾರಕ್ಕೇರಿದ ಬಳಿಕ ಕೆಟ್ಟ ದಿನಗಳನ್ನು ಕೊಟ್ಟರು. ನೋಟ್ ಬ್ಯಾನ್, ಜಿಎಸ್ ಟಿ, ಬೆಲೆಯೇರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಾಂಗ್ರೆಸ್ ಮಾತ್ರ ದೇಶವನ್ನು ಕಟ್ಟುವ ಪಕ್ಷ. ಇಲ್ಲಿ ಕೈಗೊಂಡ ನೀರಾವರಿ ಯೋಜನೆ, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗೆ ಪ್ರತಿಯಾಗಿ ಮತದಾರರು ಪ್ರೊ. ಅಲಗೂರ ಅವರನ್ನು ಲೋಕಸಭೆಗೆ ಆರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು.
ಸಚಿವ ಶಿವಾನಂದ ಪಾಟೀಲ್ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ, ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ನೀಡುವ ಗ್ಯಾರಂಟಿ ಘೋಷಿಸಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ನೀಡಿದ ಭರವಸೆಗಳನ್ನು ಈಡೇರಿಸಿದೆ. ವಿಜಯಪುರ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಈ ಎರಡೂ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕರಾದ ಯಶವಂತರಾಯ ಪಾಟೀಲ್, ಅಪ್ಪಾಜಿ ನಾಡಗೌಡ, ಅಶೋಕ ಮನಗೊಳಿ, ವಿಠಲ ಕಟಕದೊಂಡ ಮಾತನಾಡಿದರು.
ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಲೋಣಿ, ನಾಯಕರಾದ
ಹಮೀದ್ ಮುಶ್ರಿಫ್, ಸಂಗಮೇಶ ಬಬಲೇಶ್ವರ, ಡಾ. ಮಕ್ಬೂಲ್ ಬಾಗವಾನ, ಡಾ. ಗಂಗಾಧರ ಸಂಬಣ್ಣೆ, ಅಜಾದ್ ಪಟೇಲ್, ಕಾಂಗ್ರೆಸ್
ಯುವ ಮುಖಂಡ ಭೀಮಣ್ಣ ಪೂಜಾರ್ ಮುಖತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು