5:54 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ ಸಂಬಂಧ ಗುಮ್ಮಟನಗರಿಯಲ್ಲಿ ಬಿತ್ತೇ ಹೆಣ?

20/05/2024, 14:01

ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರದ ಎಪಿಎಂಸಿ ಬಳಿ ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ಯುವಕನನ್ನು ನಗರದ ಕಂಬಾರ ಓಣಿ ನಿವಾಸಿ ರೋಹಿತ್ ಸುಭಾಶ್​ ಪವಾರ(23) ಎಂದು ಗುರುತಿಸಲಾಗಿದೆ.
ವಿಜಯಪುರದ ಎಪಿಎಂಸಿ ಆವರಣದಲ್ಲಿನ ಮಾಂಸ ಮಾರುಕಟ್ಟೆಯ ಬಳಿ ರೋಹಿತ್ ನನ್ನು ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಯವಕನ ಶವವನ್ನು ಅಲ್ಲೇ ಪಕ್ಕದ ಮುಳ್ಳುಕಂಟಿಯಲ್ಲಿ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆ ನಡೆದ ಸ್ಥಳದಲ್ಲಿ ಒಂದು ಮಚ್ಚು, ಒಂದು ಚಾಕೂ, ಕಲ್ಲು ಹಾಗೂ ಖಾರದ ಪುಡಿ ದೊರಕಿದೆ. ಹಣಕಾಸಿನ‌ ವ್ಯವಹಾರ ಕೊಲೆಗೆ ಕಾರಣ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ತನಿಖೆಯಿಂದ ಇನ್ನು ಹೊರ ಬರಬೇಕಾಗಿದೆ.
ಕಳೆದ ರಂಜಾನ್ ಹಬ್ಬದ ವೇಳೆ ರೌಡಿ ಶೀಟರ್ ಹತ್ಯೆ ನಡೆದಿತ್ತು.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಂತಕರ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು