6:44 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡ್ರು ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ಜಾರಕಿಹೊಳಿ ಹೇಳಿದ್ದಾರೆ: ಸಿಎಂ ಸಿದ್ದರಾಮಯ್ಯ

05/11/2024, 22:40

ಶಿಗ್ಗಾಂವಿ(reporterkarnataka.com): ಚೆಕ್ ನಲ್ಲಿ ಲಂಚ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡ್ರು ಎನ್ನುವುದನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ ಮಾತನಾಡಿದರು.
ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ ಎಂದು ಸಿಎಂ ಕಟಕಿದರು.
ಪ್ರಧಾನಿ ಮೋದಿ ಅವರನ್ನು ಮಹಾನ್ ಸುಳ್ಳುಗಾರ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ಮಾಜಿ ಪ್ರಧಸನಿ ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯ್ ಬಾಯ್ ಆಗಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
ಇಲ್ಲಿನ‌ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು‌. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ ಎಂದು ಅವರು ನುಡಿದರು.
ಪ್ರಧಾನಿ ಮೋದಿ ಅವರು ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಪ್ರಧಾನಿ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿಯವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೀನಿ. ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ. ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು