6:17 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ವಿಜಯೇಂದ್ರ ದಂಡಯಾತ್ರೆ ಆರಂಭ: ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ಬೊಮ್ಮಾಯಿ ಸಹಿತ ಸಾಲು ಸಾಲು ನಾಯಕರ ಭೇಟಿ

13/11/2023, 22:25

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ತನ್ನ ದಂಡಯಾತ್ರೆಯನ್ನು ಶುರು ಮಾಡಿ ಬಿಟ್ಟಿದ್ದಾರೆ. ರಾಜ್ಯದ ಹಿರಿಯ ನಾಯಕರನ್ನು ಸಾಲು ಸಾಲಾಗಿ ಅವರು ಭೇಟಿಯಾಗಿದ್ದಾರೆ.


ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಮಾಜಿ ಪ್ರಧಾನಿಯ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಬೇಡಿದ್ದಾರೆ.
ಈ ವೇಳೆ ದೇವೇಗೌಡ ಅವರು ಪ್ರೀತಿಯಿಂದ ಮೈ ಸವರಿದ್ದಾರೆ.
ಶಾಲು ಹೊದೆಸಿ ಸನ್ಮಾನಿಸಿ ಶುಭ ಹಾರೈಸಿದ್ದಾರೆ. ಇದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದಾರೆ. ಶಾಸಕರಾದ ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ ಅವರು, ಉಪಸ್ಥಿತರಿದ್ದರು.
ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರನ್ನು ಕೂಡ ಭೇಟಿಯಾಗಿದ್ದಾರೆ. ಎಸ್.ಎಂ. ಕೃಷ್ಣ ಅವರ ಮನೆಗೆ ತೆರಳಿದ ವಿಜಯೇಂದ್ರ ಅವರು ಅಲ್ಲಿಯೂ ಕೃಷ್ಣ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಕೆಲವು ಸ್ವಪಕ್ಷೀಯ ನಾಯಕರ ಅಸಮಾಧಾನದ ನಡುವೆ ವಿಜಯೇಂದ್ರ ಅವರು ದಿಗ್ವಿಜಯ ಯಾತ್ರೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು