4:13 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ವಿಕಲಚೇತನರ ಬೇಡಿಕೆ ಸರಕಾರದಿಂದ ಶೀಘ್ರವೇ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

03/12/2023, 22:29

ಬೆಂಗಳೂರು(reporterkarnataka.com): ವಿಕಲಚೇತನರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು. ಮುಂದಿನ ಅಯವ್ಯಯದ ವೇಳೆಗೆ ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ “ವಿಶ್ವ ವಿಕಲಚೇತನ ದಿನಾಚರಣೆ’ ಸಮಾರಂಭದಲ್ಲಿ ಮಾತನಾಡಿದ ಸಚಿವರು, ವಿಕಲಚೇತರನ್ನು ಸಾಮಾನ್ಯರಂತೆ ಕಾಣಬೇಕು, ಅವರ ಬೇಡಿಕೆಗಳನ್ನು ಈಡೇರಿಸಲು ವೈಯಕ್ತಿಕವಾಗಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ತಿಳಿಸಿದರು.
ವಿಕಲಚೇತನರ ಜೊತೆಗೆ ಸರ್ಕಾರ ಇರುತ್ತದೆ. ಕೇವಲ ಒಂದು ದಿನಕ್ಕೆ ವಿಕಲಚೇತನರ ಬಗ್ಗೆ ಚಿಂತಿಸಬಾರದು. ವರ್ಷಪೂರ್ತಿ ಸರ್ಕಾರ ಅವರ ಕಾಳಜಿ ವಹಿಸುತ್ತದೆ. ಸ್ವಾಭಿಮಾನ ಹಾಗೂ ಸ್ವಾಲಂಬನೆ ಜೀವನಕ್ಕೆ ಸರ್ಕಾರ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು. ವಿಶೇಷವಾಗಿ ವಿಕಲಚೇತನರು ಯಾರ ಮೇಲೂ ಅವಲಂಬಿರಾಗದೆ ಸ್ವತಂತ್ರವಾಗಿ ಓಡಾಡುವಂತಾಗಬೇಕು ಎಂದರು.
ಅವರಿದ್ದಲ್ಲೇ ಸರಕಾರಿ ಸೌಲಭ್ಯ ಸಿಗಬೇಕು, ಅವರಿದ್ದಲ್ಲೇ ಆರೋಗ್ಯ ಸೇವೆ ಸಿಗಬೇಕು. ವಿಕಲಚೇತನರು ದೈಹಿಕವಾಗಿ ಅಸಮರ್ಥರಿದ್ದರೂ ಮಾನಸಿಕವಾಗಿ ತುಂಬಾ ಸದೃಢರು. ವಿಕಲಚೇತನರು ಮಾಡಿರುವ ಸಾಧನೆಯೇ ಇದಕ್ಕೆ ಸಾಕ್ಷಿ ಎಂದು ಸಚಿವರು ಹೇಳಿದರು. ರಾಜ್ಯ ಸರ್ಕಾರ ಈಗಾಗಲೇ ವಿಕಲಚೇತನರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ವಿಕಲಚೇತನರಿಗೆ ಈ ವರ್ಷ 284 ಕೋಟಿ ರೂಪಾಯಿಗಳನ್ನು ಸರ್ಕಾರ ನೀಡಿದೆ ಎಂದು ಅವರು ಹೇಳಿದರು.
ಸಾಮಾನ್ಯ ಜನರಂತೆ ವಿಕಲಚೇತನರು ಜೀವನ ನಡೆಸಲು ಸರ್ಕಾರ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದರು.
ಪಾಲಕರಿಗೆ ಹೆಚ್ಚಿನ ನೆರವು
ಸಾಮಾನ್ಯ ಮನುಷ್ಯರಿಗಿಂತ ವಿಕಲಚೇತನರ ಮಿದುಳು ಎರಡು ಪಟ್ಟು ಹೆಚ್ಚು ಕೆಲಸ ಮಾಡುತ್ತದೆ. ಇದಕ್ಕೆ ಅಂಧರು ಬರೆಯುವ ಚಿತ್ರಕಲೆಯೇ ಸಾಕ್ಷಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನುಡಿದರು.
ವಿಕಲಚೇತನರನ್ನು ಪಾಲಿಸುತ್ತಿರುವ ಪಾಲಕರು ಹಾಗೂ ಶಿಕ್ಷಕರ ಶ್ರಮ, ತಾಳ್ಮೆಯನ್ನು ಮೆಚ್ಚಲೇಬೇಕು. ಅವರಿಗೆ ಎಷ್ಟು ಅಭಿನಂದನೆ ಸಲ್ಲಿಸಿದರೂ ಸಾಲದು. ಅವರ ಸೇವಾ ಮನೋಭಾವನ್ನು ನಾವು ಗೌರವಿಸಬೇಕು. ಅವರ ಸೇವೆಯನ್ನು ಗುರುತಿಸಿ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂಧಿಸಲಿದೆ ಎಂದು ಸಚಿವರು ನುಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ಕರ್ನಾಟಕ ಬೌದ್ಧಿಕ ವಿಕಲಚೇತನ ಮಕ್ಕಳ ಪಾಲಕರ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಗಡ್ಕರಿ, ಜೆ.ಪಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು