12:24 PM Wednesday8 - January 2025
ಬ್ರೇಕಿಂಗ್ ನ್ಯೂಸ್
ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ವಿಕ್ರಂ ಗೌಡ ಎನ್ ಕೌಂಟರ್: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ 6 ಮಂದಿ ನಕ್ಸಲರು ಶರಣಾಗತಿ?

07/01/2025, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ನಾಳೆ(ಜ.8)ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಒಂದು ಎನ್ ಕೌಂಟರ್ ಗೆ ಕಾಡಲ್ಲಿ ನಕ್ಸಲರ ಸದ್ದಡಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.


ಆಲ್ ಮೋಸ್ಟ್, ಕಾಫಿನಾಡ ಕಾಡಲ್ಲಿ ನಕ್ಸಲರ ಯುಗಾಂತ್ಯವಾಗಲಿದೆ.
ನಕ್ಸಲ್ ಶರಣಾಗತಿಗೆ ದಿನಾಂಕ ನಿಗದಿಯಾಗಿದ್ದು, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗುವ ಸಾಧ್ಯತೆ ಇದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿಗೆ ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗಲಿರುವ ಪ್ರಮುಖರು.
ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಯಾಗಲಿದ್ದಾರೆ.
ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಟಿ ಮುಂದೆ ಶರಣಾಗಲಿದ್ದಾರೆ. ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಶರಣಾಗತಿ ಬಯಸಿದ್ದಾರೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ಈ ಪ್ರಕ್ರಿಯೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು